ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಜಲಜೀವನ್ ಮಿಷನ್ ಆಶ್ರಯದಲ್ಲಿ ಮಾಹಿತಿ ಕಾರ್ಯಕ್ರಮ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ನೋಡಲ್ ಅಧಿಕಾರಿ ಜಲಜೀವನ್ ಮಿಷನ್ ಇವರು ನೀರಿನ ಬಳಕೆ, ಸ್ವಚ್ಛತೆ ಸರಬರಾಜು, ವ್ಯವಸ್ಥೆ ,ನೀರು ಇಂಗಿಸುವ ಕ್ರಮ ಇತ್ಯಾದಿಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೀಡಿದರು.
ಪಂಚಾಯತು ಸಿಬ್ಬಂದಿ ವಸಂತ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಅಧ್ಯಕ್ಷತೆಯನ್ನು ವಹಿಸಿದ್ದರು. ಸಹ ಶಿಕ್ಷಕರಾದ ಲೋಕೇಶ್ ಬೆಳ್ಳಿಗೆ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಪ್ರಸಾದ್ ರೈ ವಂದಿಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ಕೂಡ ಜರುಗಿತು.