
ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಭೀಕರ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಡಿ.3 ರ ಮಧ್ಯರಾತ್ರಿ ನಡೆದಿದೆ.
ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ಕಾಲನಿ ನಿವಾಸಿ ಸೆಲ್ವ ಮೇಸ್ತ್ರಿ ಪುತ್ರ ವಿನೋದ್ ಕುಮಾರ್ (23) ಮೃತಪಟ್ಟ ಬೈಕ್ ಸವಾರ.

ಸವಣೂರುನಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೂಡ್ಸ್ ಗಾಡಿಗ ಹಾಗೂ ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಕೊಂಡಿದೆ. ಅಪಘಾತದ ತೀವ್ರತೆಯಲ್ಲಿ ಬೈಕಿನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ.
ಡಿಕ್ಕಿಯ ವೇಳೆ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.