
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಡಿ.05(ಇಂದು)ರಂದು ಬೆಳಗ್ಗೆ 09.30ಕ್ಕೆ ಸರಿಯಾಗಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ನೆರವೇರಿತು.

ಬಾಳಿಲ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಸೀತಾರಾಮ ಗೌಡ ಕಾಯರ ಇವರು ದೀಪ ಬೆಳಗಿಸಿ ಭಜನೆ ತರಬೇತಿಯನ್ನು ಉದ್ಘಾಟಿಸಿದರು. ಸಾರ್ವಜನಿಕ ದೇವತಾರಾಧನೆ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ರಾಧಾಕೃಷ್ಣ ರಾವ್ ಉಡುವೆಕೋಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ವೆಂಕಟ್ರಮಣ ಭಟ್, ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು , ಧರ್ಮಶಾಸ್ತ್ರ ಭಜನಾ ಮಂದಿರದ ಅಧ್ಯಕ್ಷರಾದ ದಾಮೋದರ ಕಲ್ಕಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇದರ ಅಧ್ಯಕ್ಷರಾದ ಲೋಕೇಶ್ ಬೆಳ್ಳಿಗೆ ಸರ್ವರನ್ನು ಸ್ವಾಗತಿಸಿದರು. ತಂಡದ ಸದಸ್ಯ ಪ್ರಶಾಂತ್ ವಂದಿಸಿದರು. ಶ್ರೀಮತಿ ರೂಪ ಸಾಯಿ ನಾರಾಯಣ ಮತ್ತು ಕುಮಾರಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಮಹಾಲಕ್ಷ್ಮೀ ಮರ್ಕಂಜ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಭಜನಾ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಸುಮಾರು 60 ಜನ ಭಜನಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು. 10.30 ರಿಂದ 1:00 ಗಂಟೆ ತನಕ ಭಜನಾ ತರಬೇತಿ ನೆರವೇರಿತು.