
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿನಿ ದೀಪಾಲಿ ಸಿ ಕೆ ಮಂಗಳೂರಿನ ನೆಹರೂ ಕೇಂದ್ರದವರು ನಡೆಸಿದ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಕುರಿತ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರಿನ ನೆಹರೂ ಯುವ ಕೇಂದ್ರ ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಸುಳ್ಯ ಹಾಗೂ ಕಡಬ ತಾಲೂಕಿನಿಂದ 22 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆಯ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಹಾಗೂ ಲತಾ ಸಿ ಕೆ ಯವರ ಪುತ್ರಿ.