
ನಾವೂರು ಸುಬ್ರಮಣ್ಯ ದೇವಸ್ಥಾನದಲ್ಲಿ ಡಿ.04ರಂದು ನಡೆದ ಲಕ್ಷದೀಪೋತ್ಸವದಲ್ಲಿ ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ವಿದ್ಯಾರ್ಥಿಗಳು ಕುಣಿತ ಭಜನಾ ಸೇವೆ ನಡೆಸಿಕೊಟ್ಟರು. ಸಂಜೆ 8.00ರಿಂದ 10.00 ರವರೆಗೆ ನಡೆದ ಕಾರ್ಯಕ್ರಮದಲ್ಲಿ ಶಾಲಾ ಭಜನಾ ತಂಡದ 25 ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ, ಎಸ್ಡಿಎಂಸಿ ಅಧ್ಯಕ್ಷ ಭುವನೇಶ್ವರ್, ಉಪಾಧ್ಯಕ್ಷೆ ಹರಿಣಾಕ್ಷಿ, ಭಜನಾ ವ್ಯವಸ್ಥಾಪಕರಾದ ಶಿವಪ್ರಸಾದ್.ಜಿ ತರಬೇತುದಾರರಾದ ಸದಾನಂದ ಆಚಾರ್ಯ, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ದೇವಳದ ಆಡಳಿತ ಮಂಡಳಿಯವರು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಸಾದ ವಿತರಣೆ ಮಾಡಿದರು.