
ಡಿ.15 ರಂದು ಅರೆಭಾಷೆ ದಿನಾಚರಣೆಯನ್ನಾಗಿ ಆಚರಿಸುತ್ತಾ ಬಂದಿದ್ದೇವೆ. ಈ ವರ್ಷ ದಶ ವರ್ಷದ ಸಂಭ್ರಮದಲ್ಲಿ ಅರೆಭಾಷೆಯ ಅನೇಕ ಪುಸ್ತಕಗಳ ಬಿಡುಗಡೆ ಮಾಡಲಿದ್ದೇವೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಹೇಳಿದರು
ಅವರು ಪತ್ರಿಕಾ ಗೋಷ್ಠಿ ಉದ್ದೇಶಿಸಿ ಡಿ.10ರಂದು ಮಾತನಾಡಿದರು. ಪ್ರಸ್ತುತ ಸಾಲಿನ ಅರೆಭಾಷೆ ದಿನಾಚರಣೆಯು ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ನಡೆಯುತ್ತಿದ್ದು ಈ ಬಾರಿ ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೌಡರ ಯುವ ಸೇವಾ ಸಂಘ(ರಿ) ಸುಳ್ಯ ಇದರ ಅಧ್ಯಕ್ಷ ಚಂದ್ರ ಕೋಲ್ಚಾರ್ ಇವರು ಉದ್ಘಾಟಿಸಲಿದ್ದಾರೆ. ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕರುಣಾಕರ ನಿಡಿಂಜಿ ಇವರು ಮುಖ್ಯ ಮಾತುಗಾರರಾಗಿ ಭಾಗವಹಿಸಲಿರುವರು. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಇದರ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸುಮಾರು 17 ಕಡೆಗಳಲ್ಲಿ ಅರೆಭಾಷೆ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಕಿರ್ಲಾಯ, ಕುಸುಮಾಧರ ಎ.ಟಿ, ಕಿರಣ್ ಕುಂಬಳಚೇರಿ ಉಪಸ್ಥಿತರಿದ್ದರು.