Ad Widget

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಶ್ರೀದೇವರ ಬಲಿ ಉತ್ಸವ, ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ರಂದು ಆರಂಭಗೊಂಡಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ತೋರಣ ಮುಹೂರ್ತ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗಪೂಜೆ ಹಾಗೂ ಮಹಾಪೂಜೆ ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಿತು.

. . . . . . . . .

. . . . . . .

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೇರ್ಪಡ ಶ್ರೀ ಮಹಿಷಮರ್ದಿನಿ ಯಕ್ಷಗಾನ ಕಲಾಕೇಂದ್ರದ ವತಿಯಿಂದ ಯಕ್ಷಮಣಿ ಶ್ರೀ ಗಿರೀಶ್ ಗಡಿಕಲ್ಲು ಇವರ ಶಿಷ್ಯ ವೃಂದದಿಂದ ಮಕ್ಕಳ ಯಕ್ಷಗಾನ ರಂಗಪ್ರವೇಶದ ಅಂಗವಾಗಿ ಲೀಲಾಮೂರ್ತಿ ಶ್ರೀಕೃಷ್ಣ ಯಕ್ಷಗಾನ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಬಸವರಾಜು.ಬಿ, ಉತ್ಸವ ಸಮಿತಿ ಅಧ್ಯಕ್ಷ ಯತೀಂದ್ರನಾಥ ರೈ ನಾಗನಕಜೆ, ಪವಿತ್ರಪಾಣಿ ಕೇಶವ ಪೂದೆನ್ನಾಯ, ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಡಿ.15 ಬುಧವಾರದಂದು ಬೆಳಿಗ್ಗೆ ಗಂಟೆ 7.00ಕ್ಕೆ ಮಹಾಗಣಪತಿ ಹೋಮ, ಕಲಶಪೂಜೆ, ಬೆಳಿಗ್ಗೆ ಗಂಟೆ 8.00ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಸಾಯಂಕಾಲ ಗಂಟೆ 4.00ಕ್ಕೆ ಕೇರ್ಪಡದ ಗೌಡ ಮನೆತನದ ಭಂಡಾರ ಮನೆಯಿಂದ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು
ಸಂಜೆ ಗಂಟೆ 6.00ರಿಂದ ರಕ್ತೇಶ್ವರಿ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ. ರಾತ್ರಿ ಗಂಟೆ 8.00ಕ್ಕೆ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading