
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣವನ್ನು ಹೊಂದಿದ ಭಾರತೀಯ ಸೇನೆಯ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಡಿ.12 ರಂದು ವನದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಿಶ್ಮಿತಾ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಇಲೈ ಅರಸ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಂದಾರ ಬಾಳುಗೋಡು ಹಾಗೂ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು. ಪೂಜಾ ಸ್ವಾಗತಿಸಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಮೀಕ್ಷ ವಂದಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ