Ad Widget

ಸುಬ್ರಹ್ಮಣ್ಯ-ಐನೆಕಿದು ಸೊಸೈಟಿಗೆ ಜಿಲ್ಲಾ ಬ್ಯಾಂಕ್ ನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಡಿ.14 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅದ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.
ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಅದ್ಯಕ್ಷ ಜಯಪ್ರಕಾಶ್ ಕೂಜುಗೋಡು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಕೆ ಅವರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಶ್ರೀಮತಿ ಭಾರತಿ.ಬಿ.ಡಿ, ಆಶಾ ಕುಮಾರಿ, ಎಚ್.ಎಲ್ ವೆಂಕಟೇಶ್, ಕಿರಣ್ ಹಾಗೂ ದಾಮೋದರ್ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!