Ad Widget

ಮಡಪ್ಪಾಡಿ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಡಿ.14 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳ ವಾರ್ಷಿಕ ಮಹಾಸಭೆಯಲ್ಲಿ ಮಡಪ್ಪಾಡಿ ಕೃಷಿ ಪತ್ತಿನ ಸಹಕಾರ ಸಂಘವು 2020-21 ನೇ ಸಾಲಿನ ವ್ಯಾವಹಾರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಗಳಿಸಿದೆ.ಹಾಗೂ ಸಹಕಾರಿ ಸಂಘ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಇವರು ಸಂಘದ ಅಧ್ಯಕ್ಷರಾಗಿ ಸತತ 25ನೇ ಬಾರಿ ಸಹಕಾರಿ ಬ್ಯಾಂಕ್ ಗಳ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ಇವರನ್ನು ದ.ಕ.ಜಿಲ್ಲಾ.ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಡಾ.ರಾಜೇಂದ್ರ.ಕುಮಾರ್ ಇವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ, ಸಂಘದ ಉಪಾಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!