ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ಡಿ.16 ರ ಗುರುವಾರದಂದು ಮುಂಜಾನೆ ದೈವಗಳ ನಡಾವಳಿ ಜರುಗಿತು.
ಡಿ.15 ರ ಬುಧವಾರದಂದು ರಾತ್ರಿ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆದು, ಕ್ಷೇತ್ರದ ದೈವಗಳಿಗೆ ಗೋಪುರ ನಡಾವಳಿ ನಡೆಯಿತು. ಕ್ಷೇತ್ರದ ರಕ್ಷಣಾ ದೈವಗಳಿಗೆ ಕೊಡುವ ಕಟ್ಟುಕಟ್ಟಲೆಯ ಕೋಲ ಮತ್ತು ಪರ್ವಗಳನ್ನೊಳಗೊಂಡ ಗೋಪುರ ನಡಾವಳಿ ಜರುಗಿತು. ಬೆಳಿಗ್ಗೆ ಪುರುಷರಾಯ ದೈವವು ಕುಮಾರಧಾರ ನದಿಗೆ ತೆರಳಿ ಮತ್ಸ್ಯ ತೀರ್ಥದಲ್ಲಿ ಪವಿತ್ರ ಮೀನುಗಳಿಗೆ ಅಕ್ಕಿ ಹಾಕುವ ಮೂಲಕ ಆಹಾರವನ್ನು ನೀಡಿ ಹರಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಅಧಿಕಾರಿಗಳು, ಸಿಬ್ಬಂದಿಗಳು ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ