
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಚುತ ಪೂಜಾರಿ, ಜೆಸಿಐ ಇಂಡಿಯಾದ ವಲಯ ತರಬೇತುದಾರರಾದ ಶ್ರೀಮತಿ ವಿಮಲ ರಂಗಯ್ಯ, ಎನ್ನೆಂಸಿಯ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಂತಿಮ ಪದವಿ ವಿದ್ಯಾರ್ಥಿಗಳಾದ ಅಶ್ವಿತಾ ಬಿ ಸಿ, ಕೃತಿಕಾ ಕೆ ಜೆ, ಮೌನವಿ ಅನಿಸಿಕೆ ವ್ಯಕ್ತಪಡಿಸಿದರು. ಕಿರಿಯ ವಿದ್ಯಾರ್ಥಿಗಳಾದ ರಾಹುಲ್ ಹಾಗೂ ಪುನೀತಾ ಕೆ ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಬೀಳ್ಕೊಡುವುದರೊಂದಿಗೆ ವಿವಿಧ ಸ್ಪರ್ಧೆಗಳನ್ನು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಘಟಕ ನಾಯಕರಾದ ನಿರಂಜನ್ ಕೆ, ಲಿಮಿತಾ ಪಿ ಜೆ, ಘಟಕದ ಉಪನಾಯಕರಾದ ಲಿಖಿತ್ ಎಂ ಎನ್, ಲತಾಶ್ರೀ ಡಿ, ಹಾಗೂ ಶುಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಬಿ ಕಾಂ ನ ರೆಡ್ ಕ್ರಾಸ್ ಸದಸ್ಯರಾದ ಅಮೃತ, ಕೃತಿಕಾ, ಅಂಕಿತಾ ನೃತ್ಯದ ಮೂಲಕ ಗಣ್ಯ ಅತಿಥಿಗಳನ್ನು ಬರಮಾಡಿಕೊಂಡರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ರತ್ನ ಸಿಂಚನ ವಯಲಿನ್ ವಾದನದ ಮೂಲಕ ಪ್ರಾರ್ಥಿಸಿ, ಪ್ರಥಮ ಬಿ ಎ ವಿದ್ಯಾರ್ಥಿನಿ ನಿರೀಕ್ಷಾ ಸ್ವಾಗತಿಸಿ, ಪ್ರಥಮ ಬಿ ಎಸ್ಸಿ ವಿದ್ಯಾರ್ಥಿನಿ ಮಹಿಮಾ ವಂದಿಸಿದರು. ದ್ವಿತೀಯ ಬಿ ಎಸ್ಸಿ ವಿದ್ಯಾರ್ಥಿನಿ ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು.