
ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಭಜನಾ ತಂಡವು ಅನೇಕ ಕಡೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷೆ ಕೊಡುಗೈ ದಾನಿ ಶ್ರೀಮತಿ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್ ಅವರು ಭಜನಾ ತಂಡದ ಹುಡುಗಿಯರಿಗೆ ಸಮವಸ್ತ್ರ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ ಇಬ್ಬರಿಗೂ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದದವರು, ಮಕ್ಕಳು ಉಪಸ್ಥಿತರಿದ್ದರು.