
ಡಿ.22 ರಂದು ಕೊಲ್ಲಮೊಗ್ರ ಕಡೆಯಿಂದ ಗಡಿಕಲ್ಲಿನ ಜಯಪ್ರಕಾಶ್ ಎಂಬುವವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟಿಯೊಂದು ರಸ್ತೆಯಲ್ಲಿ ಹೋಗುತ್ತಿದ್ದ ಪುಟ್ಟಮ್ಮ ಎಂಬ ವೃದ್ಧ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಅವರ ಬಲ ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಸ್ಕೂಟಿ ಸವಾರ ರಸ್ತೆಗೆ ಬಿದ್ದು ತಲೆಗೆ ಹಾಗೂ ಕೈಗೆ ಸ್ವಲ್ಪ ಗಾಯವಾಗಿದ್ದು, ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದ ಸಂದರ್ಭದಲ್ಲಿ ಅಲ್ಲೇ ಇದ್ದ ಉದಯ ಶಿವಾಲ ಎಂಬುವವರು ಶ್ರೀಕಾಂತ್ ಚಾಂತಾಳ ಎಂಬುವವರ ಕಾರಿನಲ್ಲಿ ಗಾಯಾಳುಗಳನ್ನು ಮಲಯಾಳ ತನಕ ಕರೆದುಕೊಂಡು ಹೋಗಿ ನಂತರ ಯುವ ತೇಜಸ್ಸು ಆಂಬುಲೆನ್ಸ್ ಗೆ ವರ್ಗಾಯಿಸಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸ್ಕೂಟಿ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವೃದ್ದ ಮಹಿಳೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ವರದಿ :- ಉಲ್ಲಾಸ್ ಕಜ್ಜೋಡಿ