Ad Widget

ಬಾಳಿಲ ಮುಪ್ಪೇರ್ಯ: ಶ್ರೀ ಮಹಾವಿಷ್ಣು ಸಿಂಗಾರಿ ಮೇಳದ ಭಜನಾ ತರಬೇತಿ ಸಮಾರೋಪ ಕಾರ್ಯಕ್ರಮ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇದರ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ ಭಜನೆ ತರಬೇತಿಯ ಸಮಾರೋಪ ಸಮಾರಂಭ ಡಿ.25 ರಂದು ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು. ರಾಧಾಕೃಷ್ಣ ರಾವ್ ಉಡುವೆಕೋಡಿ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀನಿವಾಸ ಜೋಗಿಬೆಟ್ಟು ಮತ್ತು ವೆಂಕಟ್ರಮಣ ಆಚಾರ್ಯರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಭಜನೆ ಹೇಳಿಕೊಟ್ಟರು. ಬಾಳಿಲ ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ರೈ ಅಗಲ್ಪಾಡಿ, ರವೀಂದ್ರ ರೈ ಟಪಾಲುಕಟ್ಟೆ, ಶ್ರೀಮತಿ ಸರಸ್ವತಿ ಕಾಮತ್, ತಾರಾನಾಥ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಭಗವಾನ್ ಸತ್ಯ ಸಾಯಿ ಸೇವಾ ಟ್ರಸ್ಟಿನ ಕೋಶಾಧಿಕಾರಿ ಮಹಾಬಲ ಕಾಂಚೋಡು, ಶ್ರೀಕೃಷ್ಣ ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪ ಗಣೇಶ್ ಪಾಟಾಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಕಾರ್ಯದರ್ಶಿ ಶ್ರೀಮತಿ ರೂಪ ಸಾಯಿ ನಾರಾಯಣ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸಮಿತಿಯ ಅಧ್ಯಕ್ಷರಾದ ಲೋಕೇಶ್ ಬೆಳ್ಳಿಗೆ ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. 60ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು. ರಘುರಾಮ ಕೋಟೆಬನ ಮತ್ತು ರಮೇಶ್ ಮುಪ್ಪೇರ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

. . . . . . . . .

ಊರಿನ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿ ಸಮಾರೋಪ ಸಮಾರಂಭವನ್ನು ಉತ್ತಮಗೊಳಿಸುವಲ್ಲಿ ಕಾರಣಕರ್ತರಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!