
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರ ಪರ್ವತದಲ್ಲಿ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಂಪ್ರದಾಯದ ಪ್ರಕಾರ ನಡೆದುಕೊಂಡು ಬಂದಿರುವ ಪರ್ವತದ ಕುಮಾರನ ಪಾದ ಪೂಜೆ ಡಿ.25 ರಂದು ನೆರವೇರಿತು.
ದೇವಳದ ವತಿಯಿಂದ ಕುಮಾರ ಪರ್ವತಕ್ಕೆ ಯಾತ್ರೆ ಕೈಗೊಂಡು ಅಲ್ಲಿ ಪೂಜೆ ನೆರವೇರಿಸಲಾಯಿತು. ಕುಮಾರ ಪರ್ವತದ ತುದಿಯಲ್ಲಿರುವ ಕುಮಾರನ ಪಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ