- Tuesday
- April 29th, 2025

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಎಂ.ರಾಮಕೃಷ್ಣ ರೈ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಪೂರ್ವಾಹ್ನ ಗಂಟೆ 11.00ಕ್ಕೆ ಸರಿಯಾಗಿ ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗುವಂತೆ ಸಂಘದ ಮುಖ್ಯ...

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರ ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು...

ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀಮತಿ ನೀಲಮ್ಮ ಮತ್ತು ಶ್ರೀ ಕರಿಯಪ್ಪ ಗೌಡರ ಪುತ್ರ ಚಿ|ರಾ| ಕುಸುಮಾಧರ ರವರ ವಿವಾಹವು ಅಮರಮುಡ್ನೂರು ಗ್ರಾಮದ ಕುಂಟಿಕಾನ ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಹೊನ್ನಪ್ಪ ಗೌಡರ ಪುತ್ರಿ ಚಿ|ಸೌ| ಧನಲಕ್ಷ್ಮೀ ಯವರೊಂದಿಗೆ ಡಿ.13ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಾಸುಕಿ ಸಭಾಭವನದಲ್ಲಿ ನಡೆಯಿತು.

ಡಿ.11 ಮತ್ತು 12ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ರಿ.) ಇದರ ವತಿಯಿಂದ 40ನೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು 8 ಜನ ಕ್ರೀಡಾಪಟುಗಳು ಪ್ರತಿನಿಧಿಸಿದ್ದು ಎಲ್ಲಾ 8 ಮಂದಿ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಕಾರಾಮ ಏನೆಕಲ್ಲು 100ಮೀ. ಮತ್ತು 200ಮೀ. ಓಟದಲ್ಲಿ...

ಚೇತನ್ ಕೀಲಾಡಿಯವರ ಮಾಲಕತ್ವದ ನವಶಕ್ತಿ ಇಲೆಕ್ಟಿಕಲ್ಸ್ ಸೇಲ್ಸ್ ಮತ್ತು ಸರ್ವಿಸ್ ಅಂಗಡಿಯು ನಿಂತಿಕಲ್ಲಿನ ಸಾನಿಧ್ಯ ವಾಣಿಜ್ಯ ಸಂಕೀರ್ಣದಲ್ಲಿ ಡಿ.13 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಹುದೇರಿ ಮತ್ತು ನವಜ್ಯೋತಿ ಇಲೆಕ್ಟಿಕಲ್ಸ್ ನ ಮಾಲಕ ಭಾಸ್ಕರ ಬದಿಕಾನ ದೀಪ ಬೆಳಗಿಸಿ ಉದ್ಘಾಟಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ...

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಹಾಗೂ ಕುರಲ್ ತುಳು ಕೂಟ ದುಗ್ಗಲಡ್ಕದ ಸಂಚಾಲಕರಾದ ಶ್ರೀ ಕೆ ಟಿ ವಿಶ್ವನಾಥ್ ರವರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ವೇದಿಕ್ ಕಲ್ವರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿ ದೊರೆತ ಹಿನ್ನೆಲೆಯಲ್ಲಿ ಮಿತ್ರ ಯುವಕ ಮಂಡಲದ ಸಾಮಾನ್ಯ ಸಭೆಯಲ್ಲಿ ಅಭಿನಂದಿಸಲಾಯಿತು. ಹಿರಿಯ ಸದಸ್ಯರಾದ ಶ್ರೀ ಕೃಷ್ಣ ಸ್ವಾಮಿ ಕಂಡಡ್ಕ,...

ಚಿತ್ರದುರ್ಗದಲ್ಲಿ ಡಿ.11ಮತ್ತು 12 ರಂದು ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಲಕ್ಷ್ಮಣ ಬೊಳ್ಳಾಜೆಯವರು ಲಾಂಗ್ ಜಂಪ್‌ನಲ್ಲಿ ಪ್ರಥಮ ಸ್ಥಾನ, 400 ಮಿ.ಓಟದಲ್ಲಿ ದ್ವಿತೀಯ ಮತ್ತು 100 ಮಿ.ಓಟದಲ್ಲಿ ತೃತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ಮಾಸ್ಟರ್ಸ್ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ಡಿ.11 ಹಾಗೂ ಡಿ.12ರಂದು ಚಿತ್ರದುರ್ಗದಲ್ಲಿ ನಡೆದ '40ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್' ಹಿರಿಯರಕ್ರೀಡಾಕೂಟದಲ್ಲಿ ಭಾಗವಹಿಸಿದ ಕೂತ್ಕುಂಜ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರು 100ಮೀ., 200ಮೀ. ಹಾಗೂ 400ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟವು ತಮಿಳುನಾಡಿನಲ್ಲಿ ನಡೆಯಲಿದೆ.

ಅಂತರರಾಷ್ಟ್ರೀಯ ಕ್ರೀಡಾಪಟು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸುಭಾಶ್ಚಂದ್ರ ರೈ ತೋಟರವರು ಉಡುಪಿಯಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ಹಿರಿಯರ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ 100ಮೀ. ಓಟ ಮತ್ತು 300ಮೀ. ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೆಬ್ರವರಿಯಲ್ಲಿ ಹೈದರಾಬಾದಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಯಲಿದೆ.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ವತಿಯಿಂದ ಡಿ.11 ರಂದು ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಬಿವೃದ್ಧಿ ಅಧಿಕಾರಿ ಶೇಖರ್.ಯು.ಡಿ, ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ ಪೈಲಾಜೆ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಜಾತ ಹಾಗೂ ಕಾರ್ಯದರ್ಶಿ ಮೀನಾಕ್ಷಿ, ಒಕ್ಕೂಟದ...

All posts loaded
No more posts