
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉಡುಪಿಯ ಕೃಷ್ಣಾಪುರ ಜನಾರ್ಧನ ತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಡಿ.31 ರ ಶುಕ್ರವಾರದಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಜ.18 ರಂದು ಶ್ರೀ ಕೃಷ್ಣ ಪರಮಾತ್ಮ ಮತ್ತು ಮುಖ್ಯಪ್ರಾಣ ದೇವರ ದ್ವೈವಾರ್ಷಿಕ ಪರ್ಯಾಯದ 50ನೇ ವರ್ಷದ ಪೂಜಾ ಪರ್ಯಾಯ ಮಹೋತ್ಸವ ಜರುಗಲಿದ್ದು, ಆ ಪ್ರಯುಕ್ತ ಶ್ರೀಪಾದರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬೇಟಿ ನೀಡಿದರು. ದೇವಳದ ವತಿಯಿಂದ ಶ್ರೀಪಾದರನ್ನು ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಎ.ಇ.ಓ ಪುಷ್ಪಲತಾ, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ