ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು(ಜ.01) ‘ತಂಟೆಪ್ಪಾಡಿ ಶಂಭಟ್ಟರು’ ಒಂದು ಸಾಂಸ್ಕೃತಿಕ ನೆನಪು ಹಾಗೂ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ನಡೆಯಲಿದೆ. ಸಂಜೆ 4.45ರಿಂದ ನಡೆಯಲಿರುವ ‘ತಂಟೆಪ್ಪಾಡಿ ಶಂಭಟ್ಟರು’ ಒಂದು ಸಾಂಸ್ಕೃತಿಕ ನೆನಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಶ್ರೀಕೃಷ್ಣ ಚೊಕ್ಕಾಡಿ ವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಭಟ್ ನಾಕೂರು ‘ಶಂಭಟ್ಟರ ನೆನಪು’ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಕುಶಾಲಪ್ಪ ಗೌಡ ಕಂದ್ರಪ್ಪಾಡಿ ಇರಲಿದ್ದಾರೆ. ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೂಂತಾರು ಸಂಯೋಜನೆಗೈಯಲಿದ್ದಾರೆ.
ಸಂಜೆ ಗಂಟೆ 6.30ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಕಾಲಮಿತಿ ಯಕ್ಷಗಾನ ಬಯಲಾಟ ‘ಶ್ರೀದೇವಿ ಮಹಾತ್ಮೆ’ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿನಾದ ಸಾಂಸ್ಕೃತಿಕ ಕೇಂದ್ರದ ವಸಂತ ಶೆಟ್ಟಿ ಬೆಳ್ಳಾರೆಯವರು ವಿನಂತಿಸಿದ್ದಾರೆ.
- Monday
- November 25th, 2024