ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಜ.01ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಕಾಲಮಿತಿ ಯಕ್ಷಗಾನ ಬಯಲಾಟ ‘ಶ್ರೀದೇವಿ ಮಹಾತ್ಮೆ’ ವಿಜೃಂಭಣೆಯಿಂದ ನಡೆಯಿತು. ಅನೇಕ ಪ್ರೇಕ್ಷಕರು, ಕಲಾಭಿಮಾನಿಗಳು ಉಪಸ್ಥಿತರಿದ್ದು ಯಕ್ಷಗಾನದ ಸವಿಯುಂಡರು.
ಇದಕ್ಕೂ ಮುಂಚಿತವಾಗಿ ಸಂಜೆ ‘ತಂಟೆಪ್ಪಾಡಿ ಶಂಭಟ್ಟರು’ ಒಂದು ಸಾಂಸ್ಕೃತಿಕ ನೆನಪು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಡಾ. ಶ್ರೀಕೃಷ್ಣ ಚೊಕ್ಕಾಡಿ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಭಟ್ ನಾಕೂರು ‘ಶಂಭಟ್ಟರ ನೆನಪು’ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಕುಶಾಲಪ್ಪ ಗೌಡ ಕಂದ್ರಪ್ಪಾಡಿ ಉಪಸ್ಥಿತರಿದ್ದರು. ನಿನಾದ ಸಾಂಸ್ಕೃತಿಕ ಕೇಂದ್ರದ ವಸಂತ ಶೆಟ್ಟಿ ಬೆಳ್ಳಾರೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೂಂತಾರು ಸಂಯೋಜನೆಗೈದರು. ವಸಂತ ಶೆಟ್ಟಿ ಬೆಳ್ಳಾರೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶ್ರೀಮತಿ ಲತಾ ಅಮರನಾಥ ಶೆಟ್ಟಿ ವಂದಿಸಿದರು.