ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ.02 ರಂದು ಇಂಧನ ಸಚಿವ ಸುನಿಲ್ ಕುಮಾರ್ ಆಗಮಿಸಿ ಇಂದು(ಜ.03) ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.
ನಂತರ ಇಂದು(ಜ.03) ಸುಬ್ರಹ್ಮಣ್ಯದಲ್ಲಿ ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟ್ ಪರಿವರ್ತಕ, 11 ಕೆ.ವಿ ಫೀಡರ್ ಉದ್ಘಾಟನಾ ಮಾಡಿದರು. ನಂತರ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಸಚಿವರು ಮೆಸ್ಕಾಂ ನಲ್ಲಿ ಬದಲಾವಣೆ ಆಗಬೇಕಾಗಿದೆ. ಬೆಳಕು ಯೋಜನೆಯ ಅಡಿಯಲ್ಲಿ ಪ್ರತೀ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಿದ್ದೇವೆ ಎಂದು ಹೇಳಿದ ಅವರು ಕೆಟ್ಟು ಹೋದ ಪರಿವರ್ತಕವನ್ನು 24 ಗಂಟೆಯೊಳಗೆ ಬದಲಾಯಿಸಿದ್ದೇವೆ. ಇದುವರೆಗೆ ಸುಮಾರು 20,000 ಪರಿವರ್ತಕಗಳನ್ನು ಬದಲಾವಣೆ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಹಾಗೂ ಉಪಾಧ್ಯಕ್ಷೆ ಸವಿತಾ ಭಟ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಮೆಸ್ಕಾಂ ನಿರ್ದೇಶಕ ಕಿಶೋರ್.ಬಿ.ಆರ್., ತಾಂತ್ರಿಕ ನಿರ್ದೇಶಕಿ ಪದ್ಮಾವತಿ, ಮುಖ್ಯ ಎಂಜಿನಿಯರ್ ಪುಷ್ಪ, ಮುಖ್ಯ ಆರ್ಥಿಕ ಅಧಿಕಾರಿ ಗಂಗಾಧರ್.ವಿ, ಅಧೀಕ್ಷಕ ಎಂಜಿನಿಯರ್ ಮಂಜಪ್ಪ, ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷ ಸಂತೋಷ್ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ