ಇತ್ತೀಚೆಗೆ ನೂತನವಾಗಿ ರಚಿಸಲಾದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಜನಪದಕ್ಕೆ ಸಂಬಂಧಿಸಿದ ಜಲಶ್ರೀ ಪ್ರತಿಷ್ಠಾನ ಕಡ್ಲಾರು ಇದರ ಮನವಿ ಪತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವರಾಗಿರುವ ಶ್ರೀ ಸುನೀಲ್ ಕುಮಾರ್ ಜ.೩ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ ಗುತ್ತಿಗಾರುವಿನಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸುಸಂದರ್ಭದಲ್ಲಿ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಬಂದರು, ಮೀನುಗಾರಿಕಾ ಸಚಿವ ಎಸ್. ಅಂಗಾರ, ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ ಗುತ್ತಿಗಾರು ಇದರ ಮೊಕ್ತೇಸರ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮುಳಿಯ ಕೇಶವ ಭಟ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಸಂತೋಷ್ ರೈ ಬೊಳಿಯಾರ್, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಭವಾನಿಶಂಕರ ಮುಂಡೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಯಶೋದ ಬಾಳೆಗುಡ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾನಿರತ ಹರಿಶ್ಚಂದ್ರ ಕುಳ್ಳಂಪಾಡಿ, ಮೆಸ್ಕಾಂ ಸಿಬ್ಬಂದಿ ವರ್ಗ ಮತ್ತು ವಾಲ್ತಾಜೆ ಯುವಸೇವಾ ಸಂಘದ ಗೌರವಾಧ್ಯಕ್ಷರು, ಸದಸ್ಯರು ಹಾಗೂ ಜಲಶ್ರೀ ಪ್ರತಿಷ್ಠಾನದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
- Wednesday
- December 4th, 2024