ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೊಂಡು ರೂ. 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸೇವಾಜೆ – ಮಡಪ್ಪಾಡಿ ರಸ್ತೆಗೆ ಸಚಿವರಾದ ಎಸ್.ಅಂಗಾರ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ , ಸುಳ್ಯ ಎ.ಪಿ.ಎಂ.ಸಿ.
ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಾಜಿ ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಗಂಗಯ್ಯ ಪೂಂಬಾಡಿ, ಎಂ.ಡಿ.ವಿಜಯಕುಮಾರ್, ಸೋಮಶೇಖರ ಕೇವಳ, ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಗ್ರಾಮ ವಾಸ್ತವ್ಯದ ಪ್ರತಿಫಲ : ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಳೆದ ವರ್ಷ ಮಡಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯದಲ್ಲಿ ಜನರಿಂದ ಈ ರಸ್ತೆ ಅಭಿವೃದ್ಧಿ ಬಗ್ಗೆ ಪ್ರಮುಖ ಬೇಡಿಕೆ ಬಂದಿತ್ತು. ಈ ಬಗ್ಗೆ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು ಕೂಡಲೇ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದರು.