ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ಆದಿತ್ಯವಾರದಿಂದ ಜ.21 ಶುಕ್ರವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ 16-01-2022ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, 7.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ. ದಿನಾಂಕ 17-01-2022ನೇ ಸೋಮವಾರ ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ನೃತ್ಯ ಬಲಿ ನೆರವೇರಲಿದೆ. ದಿನಾಂಕ 18-01-2022ನೇ ಮಂಗಳವಾರ ಬೆಳಿಗ್ಗೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ವಸಂತಕಟ್ಟೆ ಪೂಜೆ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಈ ದಿನ ಸಂಜೆ ಗಂಟೆ 6.00ಕ್ಕೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ಶ್ರೀಹರಿ ದರ್ಶನ ಪ್ರದರ್ಶನಗೊಳ್ಳಲಿದೆ. ದಿನಾಂಕ 19-01-2022ನೇ ಬುಧವಾರ ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಪೇಟೆ ಸವಾರಿ, ಬೆಡಿ ಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ, ರಾತ್ರಿ ಗಂಟೆ 10.30ಕ್ಕೆ ಮಹಾಪೂಜೆ ನಂತರ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತ ಬಲಿ ಉತ್ಸವ, ಶಯನೋತ್ಸವ, ಕವಾಟ ಬಂಧನ ಕಾರ್ಯಕ್ರಮ ನಡೆಯಲಿದೆ. ದಿನಾಂಕ 20-01-2022ನೇ ಗುರುವಾರ ಬೆಳಿಗ್ಗೆ ಗಂಟೆ 7.00ಕ್ಕೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಉಳ್ಳಾಕುಲು, ಮೈಷಂತಾಯ ದೈವದ ಭಂಡಾರ ತೆಗೆಯಲಾಗುವುದು. ದಿನಾಂಕ 21-01-2022ನೇ ಶುಕ್ರವಾರ ಬೆಳಿಗ್ಗೆ 7.00ರಿಂದ ಮಹಾಗಣಪತಿ ಹೋಮ, ಕಲಶಪೂಜೆ, ಬೆಳಿಗ್ಗೆ 7.30ಕ್ಕೆ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಪಿಲಿಭೂತದ ಭಂಡಾರ ತೆಗೆಯುವುದು, ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅಪರಾಹ್ನ ಗಂಟೆ 3.00ರಿಂದ ಪಿಲಿಭೂತದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 8.30ಕ್ಕೆ ಶ್ರೀ ಕಲ್ಲುರ್ಟಿ ದೈವದ ನೇಮ, ಪ್ರಸಾದ ವಿತರಣೆ ನಡೆಯಲಿರುವುದು. ಈ ಪ್ರಯುಕ್ತ ಭಕ್ತಾಧಿಗಳು ಈ ಪುಣ್ಯ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಾಗವಹಿಸಿ, ಸರ್ವ ವಿಧದ ಸಹಕಾರಗಳನ್ನಿತ್ತು ಶ್ರೀ ದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಉದ್ಭವ ಶ್ರೀ ಮಹಾಗಣಪತಿ ಹಾಗೂ ಉದ್ಭವ ಶ್ರೀ ಜಲದುರ್ಗಾದೇವಿಯ ಕೃಪೆಗೆ ಪಾತ್ರರಾಗಬೇಕಾಗುವಂತೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.
- Thursday
- November 21st, 2024