ಪ್ರಚಂಡ ಪ್ರತಿಭೆಯಿಂದ ಜಗತ್ತಿನಲ್ಲಿ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಂಡ ಸ್ಫೂರ್ತಿಪ್ರದ ವರ್ಚಸ್ಸಿನ ಸ್ವಾಮಿ ವಿವೇಕಾನಂದರ ಬದುಕಿನ ಆದರ್ಶಗಳನ್ನು, ತತ್ವಗಳನ್ನುಅರಿತು ಮುನ್ನಡೆದಾಗ ನಮ್ಮ ಬದುಕು ಪಕ್ವವಾಗುವುದು ಎಂದು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಕನ್ನಡ ಉಪನ್ಯಾಸಕಿ, ಯುವ ವಾಗ್ಮಿ ಕು.ಬೇಬಿ ವಿದ್ಯಾ ಪಿ ಬಿ ಹೇಳಿದರು.
ಅವರು ನೆಹರು ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿನ ಮಾನವಿಕ ವಿಭಾಗಗಳು ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ನಡೆದ “ಸ್ವಾಮಿ ವಿವೇಕಾನಂದರ ಬದುಕಿನ ಆದರ್ಶ ಮೌಲ್ಯಗಳು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎನ್ನೆoಸಿಯ ಪ್ರಾoಶುಪಾಲರಾದ ಪ್ರೊ ರುದ್ರ ಕುಮಾರ್ ಎಂ.ಎಂ ಅವರು ಮಾತನಾಡಿ ಮಹಾನ್ ವ್ಯಕ್ತಿಯಾಗಿ ಬಾಳಿದ ಸ್ವಾಮಿ ವಿವೇಕಾನಂದರು ರಾಷ್ಟ್ರ ದ ಉನ್ನತಿಗೆ ನೀಡಿದ ಕೊಡುಗೆ ಅಪಾರ. ಸಮಾಜ, ಯುವ ಜನತೆ ಮಾನವೀಯ ಗುಣಗಳನ್ನು ಬೆಳೆಸಿಕೊಂಡಾಗ ಸಮಾಜದ ಉನ್ನತಿ ಸಾಧ್ಯ ಎಂದು ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ಸುಳ್ಯ ಎನ್ನೆಂಸಿಯ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು, ಮಾನವಿಕ ವಿಭಾಗದ ಸಂಚಾಲಕರಾದ ಪ್ರೊ ತಿಪ್ಪೇಸ್ವಾಮಿ ಡಿ ಹೆಚ್,ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ರತ್ನಾವತಿ ಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅರ್ಪಿತ ಪ್ರಾರ್ಥಿಸಿದರು. ಮಾನವಿಕ ಸಂಘದ ಸಂಚಾಲಕರಾದ ಪ್ರೊ ತಿಪ್ಪೇಸ್ವಾಮಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಚೈತನ್ಯ ಅತಿಥಿಗಳನ್ನು ಪರಿಚಯಿಸಿ ಭವ್ಯಶ್ರೀ ಪಿ ಎಂ ವಂದಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಭರತ್ ಎಂ ಎಲ್ ಮತ್ತು ವಿದ್ಯಾರ್ಥಿನಿ ಹರ್ಷಿತ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಆರಂಭಕ್ಕೆ ಮೊದಲು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಮಮತಾ ಹಾಗೂ ಮಾನವಿಕ ಸಂಘದ ಸದಸ್ಯರು ಸಹಕರಿಸಿದರು. ಕಾಲೇಜಿನ ಬೋಧಕೇತರ ವೃಂದ,ಬಿ. ಎ.ಪದವಿ ವಿದ್ಯಾರ್ಥಿಗಳು,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.