Ad Widget

ಕೃಷಿಕರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು : ಕೆ.ಜಿ.ಬೋಪಯ್ಯ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಸ್ಥೆಯ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ಜ.14 ರಂದು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯರವರು ಪ್ರಸಕ್ತ ನಮ್ಮ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆ ಮಾಡಿ ಪೂರಕ ಸಾವಯವ ಗೊಬ್ಬರ ಬಳಕೆಯಂತಹ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ ನೀಡಿದರು.

. . . . . . . . .


ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿಯವರು ಪಯಸ್ವಿನಿ ಸಹಕಾರ ಸಂಸ್ಥೆಯು ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರಾರಂಭಿಸಿದ ನೂತನ ಯೋಜನೆ ” ಸ್ವಾವಲಂಬಿ “ಮೊಟ್ಟೆ ಕೋಳಿ ಸಾಕಾಣಿಕೆ ಘಟಕಕ್ಕೆ ಸಾಲ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಐಮರ ಇಕೋಲಾಜಿಕಲ್ ಫಾರ್ಮಿಂಗ್ ಟೆಕ್ನಾಲಜೀಸ್ ಸಂಸ್ಥೆಯ ಮಾದೆಟ್ಟಿರ ತಿಮ್ಮಯ್ಯರವರು ಮಣ್ಣು ಪರೀಕ್ಷೆಯ ವಿಧಾನ, ಅಗತ್ಯ, ಉಪಯುಕ್ತತೆ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆಗೆ ಇರುವ ವಿಫುಲ ಅವಕಾಶವನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಸಂಪಾಜೆಯ ಹಿರಿಯ ಸಾಹಿತಿ ,ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ದಿ.ಎನ್.ಎಸ್.ದೇವಿಪ್ರಸಾದ್ ರವರಿಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಅನಂತ್ .ಎನ್.ಸಿ ,ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ,ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಉಪಸ್ಥಿತರಿದ್ದರು.
ಯಶೋದರ.ಬಿ.ಜೆ ಕಾರ್ಯಕ್ರಮ ನಿರೂಪಿಸಿದರು,ಉಪಾಧ್ಯಕ್ಷ ರಾಜಾರಾಮ ಕಳಗಿ ವಂದಿಸಿದರು. ಸಂಪಾಜೆ ಚೆಂಬು ಗ್ರಾಮಗಳ ಪ್ರಗತಿಪರ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading