ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಶ್ರೀ .ಕೆ.ಜಿ.ಬೋಪಯ್ಯ ಅವರು ಜ.೧೪ ರಂದು ಉದ್ಘಾಟಿಸಿದರು. ಬಳಿಕ ಮಾತನಾಡಿ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸಲು ಮಣ್ಣು ಪರೀಕ್ಷೆ ಮಾಡಿ ಬಳಿಕ ಸಾವಯವ ಗೊಬ್ಬರ ಬಳಕೆ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಅಭಿವೃದ್ಧಿ ಸಾಧ್ಯ ಎಂದು ಸಲಹೆ ನೀಡಿದರು.
ಇದೇ ವೇಳೆ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿಯವರು ಮೊಟ್ಟೆ ಕೋಳಿ ಸಾಕಾಣಿಕೆ ಘಟಕಕ್ಕೆ ಸಾಲ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಐಮರ ಇಕೋಲಾಜಿಕಲ್ ಫಾರ್ಮಿಂಗ್ ಟೆಕ್ನಾಲಜೀಸ್ ಸಂಸ್ಥೆಯ ಶ್ರೀ ಮಾದೆಟ್ಟಿರ ತಿಮ್ಮಯ್ಯರವರು ಮಣ್ಣು ಪರೀಕ್ಷೆಯ ವಿಧಾನ, ಅಗತ್ಯ, ಉಪಯುಕ್ತತೆ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆಗೆ ಇರುವ ವಿಪುಲ ಅವಕಾಶವನ್ನು ವಿವರಿಸಿದರು
ಕಾರ್ಯಕ್ರಮದ ಆರಂಭಲ್ಲಿ ಇತ್ತೀಚೆಗೆ ನಿಧನರಾದ ಸಂಪಾಜೆಯ ಹಿರಿಯ ಸಾಹಿತಿ ,ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಶ್ರೀ ಎನ್.ಎಸ್.ದೇವಿಪ್ರಸಾದ್ ರವರಿಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಸಂಸ್ಥೆಯ ಅದ್ಯಕ್ಷ ಶ್ರೀ ಅನಂತ್ .ಎನ್.ಸಿ ,ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅದ್ಯಕ್ಷ ಶ್ರೀ ಶಾಂತೆಯಂಡ ರವಿ ಕುಶಾಲಪ್ಪ ,ಅಕ್ರಮ ಸಕ್ರಮ ಸಮಿತಿಯ ಅದ್ಯಕ್ಷ ಶ್ರೀ ನಾಗೇಶ್ ಕುಂದಲ್ಪಾಡಿ ಉಪಸ್ಥಿತರಿದ್ದರು.
ಶ್ರೀ ಯಶೋದರ.ಬಿ.ಜೆ ಕಾರ್ಯಕ್ರಮ ನಿರೂಪಣೆ ಮಾಡಿ,ಉಪಾಧ್ಯಕ್ಷ ರಾಜಾರಾಮ ಕಳಗಿ ವಂದಿಸಿದರು.ಸಂಪಾಜೆ ಚೆಂಬು ಗ್ರಾಮಗಳ ಪ್ರಗತಿಪರ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
- Saturday
- November 23rd, 2024