Ad Widget

ಪೆರುವಾಜೆ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಶ್ರೀದೇವರ ದರ್ಶನ, ಪ್ರಸಾದ ಸ್ವೀಕಾರ

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಪೆರುವಾಜೆ ಜಾತ್ರೋತ್ಸವದ ಅಂಗವಾಗಿ ನಡೆಯುವ ಯಕ್ಷಗಾನ ಬಯಲಾಟದ ಹಿನ್ನೆಲೆಯಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಆಗಮಿಸಿದ್ದು, ಶ್ರೀ ಜಲದುರ್ಗಾದೇವಿ ಹಾಗೂ ಉದ್ಭವ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದು ಪಟ್ಲ ಸತೀಶ್ ಶೆಟ್ಟಿಯವರನ್ನು ಸ್ವಾಗತಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!