ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ಮಂಗಳವಾರದಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೀಪೋತ್ಸವದ ಅಂಗವಾಗಿ ದೇವಸ್ಥಾನವನ್ನು ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ತದನಂತರ ವಸಂತಕಟ್ಟೆ ಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ.ಕೆ, ಶ್ರೀಮತಿ ಭಾಗ್ಯಲಕ್ಷ್ಮೀ, ಶ್ರೀಮತಿ ಯಶೋಧ.ಎ.ಎಸ್ ಮತ್ತು ದೇವಸ್ಥಾನದ ಮ್ಯಾನೇಜರ್ ವಸಂತ ಪೆರುವಾಜೆ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.