

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಂದು ಆರಂಭಗೊಂಡಿದ್ದು ಜ.21 ಶುಕ್ರವಾರದ ತನಕ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ವಸಂತಕಟ್ಟೆ ಪೂಜೆ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಈ ದಿನ ಸಂಜೆ ಗಂಟೆ 6.00ಕ್ಕೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ಶ್ರೀಹರಿ ದರ್ಶನ ಪ್ರದರ್ಶನಗೊಳ್ಳಲಿದೆ.