Ad Widget

ಜ.21: ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ ವಾರ್ಷಿಕೋತ್ಸವ ಸಮಾರೋಪ ಸಮಾರಂಭ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ವಹಿಸಲಿದ್ದಾರೆ. ಸಿಂಗಾರಿ ಮೇಳದ ಸದಸ್ಯರಿಗೆ ಚೆಂಡೆ ಕಲಿಸಿದ ಗುರುಗಳಾದ ಜಯಚಂದ್ರ ಉಬ್ರಂಗಳ, ನವೀನ್ ಚಂದ್ರ ಉಬ್ರಂಗಳ ಹಾಗೂ ಚಂದ್ರನ್ ಕೋಳಿಯಡ್ಕರಿಗೆ ಗುರುವಂದನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣವನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಮಾಡಲಿದ್ದಾರೆ. ಅತಿಥಿ ಅಭ್ಯಾಗತರಾಗಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್ ಪ್ರಸಾದ್, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಸುಧಾಕರ ರೈ, ಸುಳ್ಯ ಪಿ.ಎಲ್.ಡಿ ಬ್ಯಾಂಕ್ ಮಾಜಿ ನಿರ್ದೇಶಕ ಶ್ರೀನಾಥ್ ರೈ ದೋಳ್ತೋಡಿ, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶೋಧರ ನಾರಾಲು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಆಡಳಿತ ಮಂಡಳಿ ಸದಸ್ಯ ರಾಮ ಭಟ್ ಕೈತಂಜೆ, ಸುಳ್ಯ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಜಾಲ್ಸೂರು ಜಿ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ಮಾಜಿ ಸದಸ್ಯ ಚಂದ್ರಶೇಖರ ಕಾಮತ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಸುಭಾಶ್ಚಂದ್ರ ರೈ ತೋಟ ಭಾಗವಹಿಸಲಿದ್ದಾರೆ. ಬಾಳಿಲ ಮುಪ್ಪೇರ್ಯ ಸಿಂಗಾರಿ ಮೇಳದ ಸದಸ್ಯರಿಂದ ವಿಶೇಷ ಆಕರ್ಷಣೆಯಾಗಿ ಬೃಹತ್ ಚೆಂಡೆ ವಾದನ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ರಾತ್ರಿ ಗಂಟೆ 7.00ರಿಂದ ಅಮ್ಮ ಕಲಾವಿದರು ಕುಡ್ಲ ಇವರಿಂದ “ಪರಕೆ ಪೂವಕ್ಕೆ” ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading