ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಿತು. ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಅಭ್ಯಾಗತರ ಸ್ವಾಗತಗೈದ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ ಅಧ್ಯಕ್ಷರಾದ ಲೋಕೇಶ್ ಬೆಳ್ಳಿಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಬಾಳಿಲ-ಮುಪ್ಪೇರ್ಯ ಸಿಂಗಾರಿ ಮೇಳವು 2016ರಲ್ಲಿ ಆರಂಭಗೊಂಡು 2017ರಲ್ಲಿ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ರಂಗಪ್ರವೇಶಗೊಂಡಿತು. ಪುರುಷರ ಹಾಗೂ ಮಹಿಳೆಯರ ಸಿಂಗಾರಿ ಮೇಳಗಳು ರೂಪುಗೊಂಡಿದ್ದು ಸುಮಾರು 120 ಮಂದಿ ಸದಸ್ಯರು ತರಬೇತಿ ಪಡೆದು ಮೇಳದಲ್ಲಿ ಸಕ್ರಿಯರಾಗಿದ್ದಾರೆ. 200ಕ್ಕೂ ಮಿಕ್ಕಿ ಕಾರ್ಯಕ್ರಮಗಳನ್ನು ನೀಡಿರುವ ಮೇಳವು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಸಿಂಗಾರಿ ಮೇಳದ ಸದಸ್ಯರಿಗೆ ಚೆಂಡೆ ಕಲಿಸಿದ ಗುರುಗಳಾದ ಜಯಚಂದ್ರ ಉಬ್ರಂಗಳ, ನವೀನ್ ಚಂದ್ರ ಉಬ್ರಂಗಳ ಹಾಗೂ ಚಂದ್ರನ್ ಕೋಳಿಯಡ್ಕರಿಗೆ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯದ ಸದಸ್ಯರು ಗುರುವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಮಾಯಣ ಸಪ್ತಾಹ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ್ ಕುಮಾರ್ ಯು ಹಾಗೂ ಡಾ| ಈಶ್ವರಚಂದ್ರ ಜೋಯಿಸ ರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣವನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಮಾಡಿದರು.
ಅತಿಥಿ ಅಭ್ಯಾಗತರಾಗಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಸುಧಾಕರ ರೈ, ಸುಳ್ಯ ಪಿ.ಎಲ್.ಡಿ ಬ್ಯಾಂಕ್ ಮಾಜಿ ನಿರ್ದೇಶಕ ಶ್ರೀನಾಥ್ ರೈ ದೋಳ್ತೋಡಿ, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶೋಧರ ನಾರಾಲು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಆಡಳಿತ ಮಂಡಳಿ ಸದಸ್ಯ ರಾಮ ಭಟ್ ಕೈತಂಜೆ, ಸುಳ್ಯ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಜಾಲ್ಸೂರು ಜಿ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ಸುಭಾಶ್ಚಂದ್ರ ರೈ ತೋಟ, ಕಾಂಚೋಡು ದೇವಸ್ಥಾನದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ಭಾಗವಹಿಸಿದ್ದರು.
ಸಿಂಗಾರಿ ಮೇಳದ ಸದಸ್ಯರಾದ ಕು|ಹರ್ಷಿತಾ ಕಲ್ಮಡ್ಕ ಹಾಗೂ ಕು|ಅನ್ವಿತಾ ಪ್ರಾರ್ಥಿಸಿದರು. ರಾಜೇಶ್ ಬಾಳಿಲ ಹಾಗೂ ಅಶ್ವಿನಿ ಜೋಗಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಸಿಂಗಾರಿ ಮೇಳದ ಕಾರ್ಯದರ್ಶಿ ಶ್ರೀಮತಿ ರೂಪಾ ಸಾಯಿನಾರಾಯಣ ವಂದಿಸಿದರು.
ವಿಶೇಷ ಆಕರ್ಷಣೆಯಾಗಿ ಬಾಳಿಲ ಮುಪ್ಪೇರ್ಯ ಸಿಂಗಾರಿ ಮೇಳದ ಸದಸ್ಯರಿಂದ ಬೃಹತ್ ಚೆಂಡೆ ವಾದನ ಕಾರ್ಯಕ್ರಮ ಪ್ರದರ್ಶನಗೊಂಡಿತು.
ನಂತರ ಅಮ್ಮ ಕಲಾವಿದರು ಕುಡ್ಲ ಇವರಿಂದ “ಪರಕೆ ಪೂವಕ್ಕೆ” ಎಂಬ ತುಳು ಹಾಸ್ಯಮಯ ನಾಟಕ ನಡೆಯಿತು.