

ಸುಳ್ಯದ ಪ್ರತಿಷ್ಠಿತ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯಾದ ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಡಾ.ಬಿ.ರೇವತಿ ನಂದನ್, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು , ಸಿಬ್ಬಂದಿ ವರ್ಗದವರು , ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.