Ad Widget

ಎಣ್ಮೂರು ಪ್ರೌಢಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡಿಕೆ ತೋಟದಲ್ಲಿ ಶ್ರಮದಾನ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡರವರು ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಯು.ಕೆ ಇವರು
ಈ ದಿನದ ಮಹತ್ವದ ಕುರಿತು ಮಾತನಾಡಿದರು. ಎಸ್ಡಿಎಂಸಿ ಸದಸ್ಯರಾದ ಶ್ರೀ ಮಾಧವ ಲೆಕ್ಕೆಸಿರಿಮಜಲು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದ್ವಿತೀಯ ಮತ್ತು ತೃತೀಯ ಸೋಪಾನ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಆ ಬಳಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಅಡಿಕೆ ತೋಟದಲ್ಲಿ ಶ್ರಮದಾನ ನಡೆಯಿತು.
ಗೈಡ್ಸ್ ಶಿಕ್ಷಕಿಯಾದ ಶ್ರೀಮತಿ ಉಷಾ ಕೆ ಎಸ್ ಸ್ವಾಗತಿಸಿ, ಸ್ಕೌಟ್ಸ್ ಮಾಸ್ಟರ್ ಲಿಂಗಪ್ಪ ಬೆಳ್ಳಾರೆ ವಂದಿಸಿದರು.
ಸ್ಕೌಟ್ಸ್ ಶಿಕ್ಷಕರಾದ ಶ್ರೀ ರಾಮಚಂದ್ರ ಗೌಡ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading