ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ “ಅಯ್ಯನಕಟ್ಟೆ ಜಾತ್ರೆ”ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮ ನಡಾವಳಿ ನಡೆಯಿತು. ನಂತರ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಗೌರವಾಧ್ಯಕ್ಷರಾದ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ, ಕಾರ್ಯದರ್ಶಿ ಪಿ.ಜಿ.ಎಸ್.ಎನ್ ಪ್ರಸಾದ್, ಕೋಶಾಧಿಕಾರಿ
ಗಣೇಶ ಮುದ್ದಾಜೆ ಹಾಗೂ ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಶ್ರೀನಾಥ್ ರೈ ದೋಳ್ತೋಡಿ ಮತ್ತು ಸಮಿತಿಯ ಸದಸ್ಯರು, ಸಂಚಾಲಕರು, ಉಪಸಮಿತಿಗಳ ಸದಸ್ಯರು, ಊರವರು, ಭಗವದ್ಭಕ್ತರು ಉಪಸ್ಥಿತರಿದ್ದರು.