ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ “ಅಯ್ಯನಕಟ್ಟೆ ಜಾತ್ರೆ” ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ ಹಾಗೂ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು ಬಳಿಕ ನೇಮೋತ್ಸವ ನಡೆಯಿತು.
ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5.00ರಿಂದ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿರುವುದು. ಈ ಎಲ್ಲಾ ಕಾರ್ಯಗಳಲ್ಲಿ ಭಗವದ್ಭಕ್ತರು ಭಾಗಿಗಳಾಗಿ ಶ್ರೀ ದೈವಗಳ ಕೃಪೆಗೆ ಪಾತ್ರರಾಗುವಂತೆ ಸಂಘಟಕರು ವಿನಂತಿಸಿದ್ದಾರೆ.