- Thursday
- November 21st, 2024
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಯುವಕ ಮಂಡಲ(ರಿ.) ಕಳಂಜ ಇದರ ಆಶ್ರಯದಲ್ಲಿ ತೆಂಕುತಿಟ್ಟಿನ ಸುಪ್ರಸಿದ್ಧ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಶ್ರೀ ಹನುಮಗಿರಿ ಮೇಳದಿಂದ "ಶುಕ್ರನಂದನೆ" ಎಂಬ ಪುರಾಣ ಕಥಾ ಭಾಗದ ಯಕ್ಷಗಾನ ಬಯಲಾಟ ಇಂದು ಸಂಜೆ ಗಂಟೆ 6.00ಕ್ಕೆ ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಾಭಿಮಾನಿಗಳು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.
ನೆಲ್ಲೂರುಕೆಮ್ರಾಜೆ ಗ್ರಾಮದ ಎಲಿಮಲೆ ವಲಿಕಜೆ ಕಾಲನಿ ಬಳಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮೂರು ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿಗಾಗಿ ತೆರೆದ ಬಾವಿ ನಿರ್ಮಾಣಕ್ಕೆ ಗುದ್ದಲಿಪೂಜೆ ಜ.30 ರಂದು ನಡೆಯಿತು. ಸಚಿವ ಎಸ್ ಅಂಗಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಹೆಚ್ಚುವರಿ ಅನುದಾನ ಒದಗಿಸಿ ಪಂಪ್ ಅಳವಡಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ, ಬಿಜೆಪಿ...
6ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯು ಅಂಡಮಾನ್ ನಿಕೋಬಾರ್ ದ್ವೀಪದ ಆರ್. ಜಿ. ಟಿ ಪಬ್ಲಿಕ್ ವಿದ್ಯಾಲಯ ಶಾಲೆ ಪೋರ್ಟ್ ಬ್ಲೇರ್ ನಲ್ಲಿ ಆನ್ಲೈನ್ ಮೂಲಕ ನಡೆದ ಸ್ಪರ್ಧೆಯಲ್ಲಿ 21ರಿಂದ 30ರ ವಿಭಾಗದಲ್ಲಿ ಶರತ್ ಮರ್ಗಿಲಡ್ಕ ದ್ವಿತೀಯ ಸ್ಥಾನ,08 ರಿಂದ 10ರ ವಿಭಾಗದಲ್ಲಿ ಆರಾಧ್ಯ ಎ ರೈ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಶರತ್ ಮರ್ಗಿಲಡ್ಕ ರವರ...
ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅನಾರೋಗ್ಯದಿಂದ ಗಂಡನನ್ನು ಕಳೆದುಕೊಂಡು ಮನೆಯೂ ಇಲ್ಲದೇ ಚಿಕ್ಕ ಮಕ್ಕಳ ಜೊತೆ ಜೀವನ ನಡೆಸುತ್ತಿರುವ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ. ಒಂದು ಹೆಜ್ಜೆ ಉತ್ತಮ ಸಮಾಜಕ್ಕಾಗಿ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಕಡಬ ತಾಲೂಕು ಪುಣ್ಚಪ್ಪಾಡಿ ಗ್ರಾಮ ಪಂಚಾಯತ್...