
ಯುವಕ ಮಂಡಲ(ರಿ.) ಕಳಂಜ ಇದರ ಆಶ್ರಯದಲ್ಲಿ ತೆಂಕುತಿಟ್ಟಿನ ಸುಪ್ರಸಿದ್ಧ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಶ್ರೀ ಹನುಮಗಿರಿ ಮೇಳದಿಂದ “ಶುಕ್ರನಂದನೆ” ಎಂಬ ಪುರಾಣ ಕಥಾ ಭಾಗದ ಯಕ್ಷಗಾನ ಬಯಲಾಟ ಇಂದು ಸಂಜೆ ಗಂಟೆ 6.00ಕ್ಕೆ ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಾಭಿಮಾನಿಗಳು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.