
ನೆಲ್ಲೂರುಕೆಮ್ರಾಜೆ ಗ್ರಾಮದ ಎಲಿಮಲೆ ವಲಿಕಜೆ ಕಾಲನಿ ಬಳಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮೂರು ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿಗಾಗಿ ತೆರೆದ ಬಾವಿ ನಿರ್ಮಾಣಕ್ಕೆ ಗುದ್ದಲಿಪೂಜೆ ಜ.30 ರಂದು ನಡೆಯಿತು. ಸಚಿವ ಎಸ್ ಅಂಗಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಹೆಚ್ಚುವರಿ ಅನುದಾನ ಒದಗಿಸಿ ಪಂಪ್ ಅಳವಡಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ದಾಸನಕಜೆ ಆದಿಮೊಗೆರ್ಕಳ ದೈವಸ್ಥಾನದ ಅಧ್ಯಕ್ಷ ಕೃಷ್ಣ, ನೆಲ್ಲೂರುಕೆಮ್ರಾಜೆ ಗ್ರಾ.ಪಂ.ಸದಸ್ಯರಾದ ವೇಣುಗೋಪಾಲ ಪುನ್ಕುಟ್ಟಿ, ವಂದನಾ ಹೊಸ್ತೋಟ, ಧನಂಜಯ, ರಾಮಚಂದ್ರ ನಾರ್ಣಕಜೆ ಹಾಗೂ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು. ಜಗದೀಶ್ ವಲಿಕಜೆ ಸ್ವಾಗತಿಸಿ, ವಂದಿಸಿದರು.