ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮವು ಫೆ.11 ಶುಕ್ರವಾರದಂದು ಆರಂಭಗೊಳ್ಳಲಿದ್ದು, ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11 ಶುಕ್ರವಾರದಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇವರಿಂದ ಚೆಂಡೆವಾದನದೊಂದಿಗೆ ಹಸಿರುವಾಣಿಯನ್ನು ದೇವಾಲಯಕ್ಕೆ ತಂದು ಸಮರ್ಪಿಸಲಾಗುವುದು. ರಾತ್ರಿ ಗಂಟೆ 7.00ರಿಂದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವತಿಯಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ, ರಾತ್ರಿ ಗಂಟೆ 7.30ರಿಂದ ಬಿಂಬಶುದ್ಧಿ, ವಾಸ್ತುಪೂಜೆ, ವಾಸ್ತು ರಕ್ಷೋಘ್ನ ಹೋಮ ನಡೆಯಲಿರುವುದು. ಫೆ.12 ಶನಿವಾರದಂದು ಬೆಳಗ್ಗೆ 7.30ರಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ಬೆಳಗ್ಗೆ 11.00ರಿಂದ ಮಹಿಳೆಯರಿಂದ ಕುಂಕುಮಾರ್ಚನೆ, ಮಧ್ಯಾಹ್ನ 12.30ರಿಂದ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.00ರಿಂದ 6.30 ತಾಯಂಬಕಂ, ರಾತ್ರಿ 7.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ರಾತ್ರಿ 8.30ರಿಂದ ಶ್ರೀ ಮಂಜುನಾಥೇಶ್ವರ ಸ್ವಾಮಿ ಹಾಗೂ ಅಮ್ಮನವರ ಬಲಿ ಉತ್ಸವ ನಡೆದು ಶ್ರೀ ದೇವರ ಗಂಧಪ್ರಸಾದ ವಿತರಣೆಯಾಗಲಿದೆ. ಫೆ.ರವಿವಾರದಂದು ಬೆಳಗ್ಗೆ 7.30ರಿಂದ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4.00ಕ್ಕೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯುವುದು, ಸಂಜೆ 6.00ರಿಂದ ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ 9.00ರಿಂದ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ, ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಫೆ.14 ಸೋಮವಾರದಂದು ಬೆಳಗ್ಗೆ 6.00ರಿಂದ ಬೆಳಗ್ಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ 12.00ರಿಂದ ಮಹಾಪೂಜೆ, ಅನ್ನಸಂತರ್ಪಣೆ, ಅನಂತರ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು ಕಾಯಾರ ಮಾಡದಲ್ಲಿ ನೇಮೋತ್ಸವ, ಸಂಜೆ 6.00ರಿಂದ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದ ನಂತರ ರಾತ್ರಿ 10.00ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿರುವುದು. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯಲಿದೆ.
ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಫೆ.13 ರವಿವಾರದಂದು ಸಂಜೆ ಗಂಟೆ 4.00ರಿಂದ 5.00ರ ತನಕ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಪ್ರವರ್ತಿತ ಶ್ರೀ ಮಂಜುನಾಥ ಭಜನಾ ಮಂಡಳಿ ವತಿಯಿಂದ ಭಜನೆ ಹಾಗೂ ಮಕ್ಕಳ ಕುಣಿತ ಭಜನೆ, ಸಂಜೆ ಗಂಟೆ 5.00ರಿಂದ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ- ದಕ್ಷಯಾಗ, ಷಣ್ಮುಖ ವಿಜಯ ಯಕ್ಷಗಾನ ಬಯಲಾಟ ನಡೆಯಲಿರುವುದು. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಗವದ್ಭಕ್ತರು ಸಕುಟುಂಬಿಕರಾಗಿ ಬಂದು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಅನುಗ್ರಹಕ್ಕೆ ಪಾತ್ರರಾಗುವಂತೆ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಧರ್ಮದರ್ಶಿಗಳಾದ ಯಸ್.ಬಿ.ದಳ ವಿನಂತಿಸಿದ್ದಾರೆ.
ಮಾ.01 ಮಂಗಳವಾರದಂದು “ಮಹಾಶಿವರಾತ್ರಿ ಉತ್ಸವ” ದ ಅಂಗವಾಗಿ ಸಂಜೆ ಗಂಟೆ 6.00ರಿಂದ ದೇವಾಲಯದಲ್ಲಿ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.