- Wednesday
- April 2nd, 2025

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.12ರಿಂದ ಫೆ.16ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಫೆ.08ರಂದು ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ವರ್ಗ ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಫೆ.12 ಶನಿವಾರದಂದು ಬೆಳಗ್ಗೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ,...