ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾವ್ಯ ಮೆಡಿಕಲ್ ಫೆ. 7 ರಂದು ಶುಭಾರಂಭಗೊಂಡಿತು. ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದ ಆಡಳಿತ ಮೊಕ್ತೇಸರ ವೆಂಕಟ್ ವಳಲಂಬೆ, ತಾ.ಪಂ. ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಕಾಂಪ್ಲೆಕ್ಸ್ ಮಾಲಕ ದೇವಿಪ್ರಸಾದ್ ಚಿಕ್ಮುಳಿ ಮತ್ತಿತರರು ಉಪಸ್ಥಿತರಿದ್ದರು. ಮಾಲಕರಾದ ಅರವಿಂದ್ ಸ್ವಾಗತಿಸಿದರು.
- Tuesday
- December 3rd, 2024