ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಪರವಾಗಿ ಹಸಿರು ಕಾಣಿಕೆ ಸಮರ್ಪಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಕಾರ್ಯದರ್ಶಿ ಪಿ.ಜಿ.ಎಸ್.ಎನ್.ಪ್ರಸಾದ್, ವಿಶ್ವನಾಥ ಪರವ, ಸತೀಶ ದಳ, ಕೇಶವ ಪೋಸೋಡು ಮುಂತಾದವರು ಉಪಸ್ಥಿತರಿದ್ದರು.
- Thursday
- October 31st, 2024