ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರವು ಹರಿಹರ ಪಲ್ಲತ್ತಡ್ಕದ ಸೇವಾ ಕೇಂದ್ರದಲ್ಲಿ ಫೆ.13 ರಂದು ಉದ್ಘಾಟನೆಗೊಂಡಿತು. ಡಾ.ಚಂದ್ರಶೇಖರ ಕಿರಿಭಾಗ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ದೀಪ ಬೆಳಗಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಈ ಡಿಜಿಟಲ್ ಸೇವಾ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ, ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಮಕೃಷ್ಣ ಕುದ್ಕುಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ನಿಕಟಪೂರ್ವ ಅದ್ಯಕ್ಷರಾದ ಹರ್ಷ ಪಾಲ್ತಾಡು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಲಕ್ಷ್ಮಣ ಐನೆಕಿದು, ಸೇವಾ ಪ್ರತಿನಿಧಿ ಶ್ರೀಮತಿ ರೇಖಾ, ಶ್ರುತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ