

ಕಾಂಚೋಡು ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು(ಫೆ.13) ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಮಕ್ಕಳ ಭಜನಾ ತಂಡದಿಂದ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮದ ನಂತರ ದೇವಸ್ಥಾನದ ವತಿಯಿಂದ ಭಜನಾ ಕಾರ್ಯಕ್ರಮದಲ್ಲಿ ಭಾಗಿಗಳಾದ ವಿದ್ಯಾರ್ಥಿಗಳಿಗೆ ಹಾಗೂ ಭಜನಾ ತಂಡದ ಮುಖ್ಯಸ್ಥರಿಗೆ ಪ್ರಸಾದ ಹಾಗೂ ಸ್ಮರಣಿಕೆ ನೀಡಲಾಯಿತು.
