ಇಂದು ರಾತ್ರಿಯಿಂದ ನೇಮೋತ್ಸವ ಆರಂಭ
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶುಕ್ರವಾರದಂದು ಆರಂಭಗೊಂಡಿದ್ದು ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು ದೇವಾಲಯದಲ್ಲಿ ಬೆಳಗ್ಗೆ ಗಣಪತಿ ಹವನ, ಬೆಳಗಿನ ಪೂಜೆ ನಡೆದು ಬಳಿಕ ಶ್ರೀ ಮಂಜುನಾಥ ಸ್ವಾಮಿ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ ನಡೆಯಿತು. ನಂತರ ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಇಂದು ಸಂಜೆ 4.00ಕ್ಕೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯುವುದು, ಸಂಜೆ 6.00ರಿಂದ ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ 9.00ರಿಂದ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ, ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ಗಂಟೆ 4.00ರಿಂದ 5.00ರ ತನಕ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಪ್ರವರ್ತಿತ ಶ್ರೀ ಮಂಜುನಾಥ ಭಜನಾ ಮಂಡಳಿ ವತಿಯಿಂದ ಭಜನೆ ಹಾಗೂ ಮಕ್ಕಳ ಕುಣಿತ ಭಜನೆ, ಸಂಜೆ ಗಂಟೆ 5.00ರಿಂದ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ- ದಕ್ಷಯಾಗ, ಷಣ್ಮುಖ ವಿಜಯ ಯಕ್ಷಗಾನ ಬಯಲಾಟ ನಡೆಯಲಿರುವುದು.
ಫೆ.14 ಸೋಮವಾರದಂದು ಬೆಳಗ್ಗೆ 6.00ರಿಂದ ಬೆಳಗ್ಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ 12.00ರಿಂದ ಮಹಾಪೂಜೆ, ಅನ್ನಸಂತರ್ಪಣೆ, ಅನಂತರ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು ಕಾಯಾರ ಮಾಡದಲ್ಲಿ ನೇಮೋತ್ಸವ, ಸಂಜೆ 6.00ರಿಂದ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದ ನಂತರ ರಾತ್ರಿ 10.00ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿರುವುದು. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯಲಿದೆ.