Ad Widget

ಬೆಳ್ಳಾರೆ: ಅಜಪಿಲ ಜಾತ್ರಾ ಸಂಭ್ರಮ- ಜಾತ್ರೋತ್ಸವದ ಅಂಗವಾಗಿ ಶ್ರೀ ದೇವರ ನೃತ್ಯ ಬಲಿ

ಫೆ.16ರಂದು ಹಗಲು ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದು, ಫೆ.14 ಸೋಮವಾರದಂದು ಬೆಳಗ್ಗೆ ಗಣಪತಿ ಹವನ, ಉಷಾಃಪೂಜೆ,...

ಬೆಳ್ಳಾರೆ ವಿಹಿಂಪ ವತಿಯಿಂದ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ಶ್ರೀಮತಿ ಸುಹಾನ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಸುರೇಶ್ ಶೆಟ್ಟಿ ಪನ್ನೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
Ad Widget

ಫೆ.12-ಫೆ.18: ಎಡಮಂಗಲ ಜಾತ್ರೋತ್ಸವ- ವೈಭವದ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.14 ಸೋಮವಾರದಂದು(ಇಂದು) ಬೆಳಗ್ಗೆ ಬಲಿ ಹೊರಟು ಉತ್ಸವ "ಶ್ರೀ ದೇವರ ದರ್ಶನ ಬಲಿ", ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು...

ಸುಬ್ರಹ್ಮಣ್ಯ: ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನುಡಿನಮನ ಕಾರ್ಯಕ್ರಮ

ಸುಬ್ರಹ್ಮಣ್ಯ ಎ.ಬಿ.ವಿ.ಪಿ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ 'ನುಡಿ ನಮನ' ಕಾರ್ಯಕ್ರಮವನ್ನು ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯದಲ್ಲಿ ಫೆ.14ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ದಿನೇಶ್ ಸಿ ಡಿ ಹಾಗೂ ಯತೀಶ್ ಇವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹರೀಶ್ ಕಾಮತ್ ಹಾಗೂ ನಿವೃತ್ತ ಯೋಧರಾದ ದಿನೇಶ್ ಸಿ ಡಿ ಮತ್ತು ಯತೀಶ್...

ನಡುಗಲ್ಲು : ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್.(ರಿ) ಗುತ್ತಿಗಾರು ವಲಯದ ನಾಲ್ಕೂರು ಗ್ರಾಮದ ನಡುಗಲ್ಲು ಸೇವಾ ಕೇಂದ್ರದಲ್ಲಿ ಗ್ರಾಹಕ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಜನಜಾಗೃತಿ ಸದಸ್ಯ, ಹಾಗೂ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ್ ಚಾರ್ಮಾತ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕ ವಸಂತ್ ಉತ್ರಂಬೆ ಯವರು ಲ್ಯಾಪ್...

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಫೆ.14 ರ ಸೋಮವಾರದಂದು ಗೊನೆ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಕಿಶೋರ್ ಕುಮಾರ್ ಕೂಜುಗೋಡು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೂಜುಗೋಡು, ಆಡಳಿತಾಧಿಕಾರಿ ಭವಾನಿಶಂಕರ.ಎನ್, ಚಂದ್ರಶೇಖರ ಗೌಡ ಕಿರಿಭಾಗ, ಕೇಶವಮೂರ್ತಿ ಪಲ್ಲತ್ತಡ್ಕ,...

ಚೊಕ್ಕಾಡಿ: ಸುಳುಗೋಡು ಕುಳ್ಳಾಜೆ ಹೊಸ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಅಮರಪಡ್ನೂರು ಗ್ರಾಮದ ಕುಳ್ಳಾಜೆ, ಪುಂಡೂರು, ಮೋಟುಕಾನ, ಪಾಡಾಜೆ ಜನವಸತಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಗೆ ಗ್ರಾಮ ಪಂಚಾಯತ್ 15ನೇ ಹಣಕಾಸಿನ ಅನುದಾನದಲ್ಲಿ ಕಾಮಗಾರಿ ನಡೆದಿದ್ದು, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರುರವರು ಗುದ್ದಲಿಪೂಜೆ ನಡೆಸಿ ಚಾಲನೆ ನೀಡಿದರು. ಹಲವು ವರ್ಷಗಳಿಂದ ಬಹು ಬೇಡಿಕೆಯ ರಸ್ತೆ ಇದಾಗಿದ್ದು ಸುಮಾರು 75ಕ್ಕೂ ಮಿಕ್ಕಿ ಮನೆಯ ಫಲಾನುಭವಿಗಳು ಸುಮಾರು...

ಬಳ್ಪ : ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್.(ರಿ) ಗುತ್ತಿಗಾರು ವಲಯದ ಬಳ್ಪ ಗ್ರಾಮದ ಸೇವಾಕೇಂದ್ರದಲ್ಲಿ ಗ್ರಾಹಕ ಡಿಜಿಟಲ್ ಸೇವಾಕೇಂದ್ರದ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಕೆನರಾ ಬ್ಯಾಂಕ್ ಬಳ್ಪ ಶಾಖೆಯ ಮ್ಯಾನೇಜರ್ ಆಗಿರುವ ಆಶಿಶ್ ರಂಜನ್ ಲ್ಯಾಪ್ ಟಾಪ್ ಹಸ್ತಾಂತರಿಸಿದರು. ವಲಯ ಮೇಲ್ವಿಚಾರಕ ಮುರಳೀಧರ...

ಸುಳ್ಯ: ಬಸ್ ನಿಲ್ದಾಣದ ಅವ್ಯವಸ್ಥೆಯಿಂದ ಪ್ರಯಾಣಿಕರಿಗೆ ತೊಂದರೆ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿದೆ. ಇದರಿಂದ ಪ್ರಯಾಣಿಕರು ನಿಂತುಕೊಳ್ಳುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಮಾಡುಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಬಗ್ಗೆ ಡಿಪೋ ಮೆನೇಜರ್ ಅವರನ್ನು ಸಂಪರ್ಕಿಸಿದಾಗ ಮೇಲಾಧಿಕಾರಿಗಳಿಗೆ...

ಹರಿಹರ ಪಲ್ಲತ್ತಡ್ಕ : ಮಾ.06 ರಂದು ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...
Loading posts...

All posts loaded

No more posts

error: Content is protected !!