ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರವು ಫೆ.13 ರಂದು ಕೊಲ್ಲಮೊಗ್ರ ಸೇವಾ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು. ವಕೀಲರಾದ ಬಾಲಸುಬ್ರಹ್ಮಣ್ಯ ಭಟ್ ನೂತನ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾಗಿರುವ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಅದ್ಯಕ್ಷರಾದ ಮಾಧವ ಚಾಂತಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಗಿರಿಧರ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರ ಒಕ್ಕೂಟದ ಅಧ್ಯಕ್ಷರಾದ ಜನಾರ್ದನ ದೋಣಿಪಳ್ಳ ಹಾಗೂ ಬಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋಧ ಅಂಬೆಕಲ್ಲು, ಕಲ್ಮಕಾರು ಒಕ್ಕೂಟದ ಉಪಾಧ್ಯಕ್ಷರಾದ ರಾಮಣ್ಣ ಅಂಜನಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಈ ಡಿಜಿಟಲ್ ಸೇವಾ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.
ರಾಜನ್ ನೆಲ್ಲಿಪುಣಿ, ಚಂದ್ರಶೇಖರ ಕೋನಡ್ಕ, ಹರ್ಷ ಅಡ್ನೂರು ಮಜಲು, ಮಣಿಕಂಠ ಕಟ್ಟ, ದೇವಕುಮಾರ್ ಬಲ್ಕಬೆ ಹಾಗೂ ಸೇವಾ ಪ್ರತಿನಿಧಿ ಸಾವಿತ್ರಿ, ಶೋಭಾ, ನಿಶ್ಮಿತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ