

ಹಿಜಾಬ್ ಗಲಾಟೆ ಸುಳ್ಯಕ್ಕೂ ಕಾಲಿರಿಸಿದ್ದು, ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ನಡೆದಿದೆ. ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ. ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು ಬಂದೋಬಸ್ತ್ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.