Ad Widget

ಶ್ರದ್ಧಾ-ಭಕ್ತಿಯ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.12ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆದು ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ, ರಾತ್ರಿ ಧ್ವಜಾರೋಹಣ ನಡೆಯಿತು. ಬಳಿಕ ಬಯನ ಬಲಿ, ರಾತ್ರಿ ಪೂಜೆ, ನೃತ್ಯ ಬಲಿ ನಡೆಯಿತು. ಫೆ.13ರಂದು ಬೆಳಗ್ಗೆ ದೇವಳದಲ್ಲಿ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಪ್ರಸಾದ ವಿತರಣೆಯಾಯಿತು. ರಾತ್ರಿ ಶಿವೇಲಿ, ದರ್ಶನ ಬಲಿ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಫೆ.14ರಂದು ಬೆಳಗ್ಗೆ ಗಣಪತಿ ಹವನ, ಉಷಾಃಪೂಜೆ ಶಿವೇಲಿ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪೂಜೆಯ ನಂತರ ನೃತ್ಯ ಬಲಿ ನಡೆಯಿತು. ಫೆ.15ರಂದು ಬೆಳಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಭೂತಬಲಿ, ಸೇವೆ ಸುತ್ತು, ಪೇಟೆ ಸವಾರಿ, ಸಿಡಿಮದ್ದು ಪ್ರದರ್ಶನ ನಡೆದು ರಾತ್ರಿ ಪೂಜೆ, ಶಯನ, ಕವಾಟಬಂಧನ ನೆರವೇರಿತು. ಫೆ.16ರಂದು ಪೂರ್ವಾಹ್ನ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟು ಬಲಿ ಬಳಿಕ ಅವಭೃಥ ಸ್ನಾನ ನಡೆಯಿತು. ನಂತರ ಶ್ರೀ ದೇವರ ದರ್ಶನ ಬಲಿ ನಡೆದು ಮಧ್ಯಾಹ್ನ ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ ನೆರವೇರಿತು. ಬಳಿಕ ಧ್ವಜ ಅವರೋಹಣ, ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು.

. . . . . . .


ರಾತ್ರಿ ಚಾಮುಂಡಿ ಅಗ್ನಿಗುಳಿಗ ದೈವದ ಭಂಡಾರ ತೆಗೆದು, ಅನ್ನಸಂತರ್ಪಣೆ ನಡೆಯಿತು. ಬಳಿಕ ಭೂತಕೋಲ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯುವುದರೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀಮತಿ ಸುಹಾನ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ ಹಾಗೂ ಸದಸ್ಯರು ಅರ್ಚಕರಾದ ಉದಯಕುಮಾರ.ಕೆ.ಟಿ, ದೇವಸ್ಥಾನದ ಕಛೇರಿ ನಿರ್ವಾಹಕ ಮಹೇಶ್.ಕೆ ಕಲ್ಪನೆ ಹಾಗೂ ಸಿಬ್ಬಂದಿ ವರ್ಗ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರುಗಳು, ಸ್ವಯಂಸೇವಕರು, ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು ಕೃತಾರ್ಥರಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!